ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಕಾಡು ಶಾಲೆಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಶಿಫಾರಸ್ಸಿನ ಮೇರೆಗೆ ಮಂಜೂರಾದ MRPL ಸಂಸ್ಥೆಯ CSR ನಿಧಿಯಿಂದ 19 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶೌಚಾಲಯ ಕಟ್ಟಡದ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ನನ್ನ ಶಿಫಾರಸ್ಸಿನ ಮೇರೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಶಾಲೆಗಳ ಶೌಚಾಲಯ ನಿರ್ಮಾಣಕ್ಕೆ MRPL ಸಂಸ್ಥೆ ತಮ್ಮ ಸಿ. ಎಸ್. ಆರ್. ನಿಧಿಯಿಂದ ಸುಮಾರು 2 ಕೋಟಿ ಅನುದಾನ ಮಂಜೂರು ಮಾಡುವ ಮೂಲಕ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡಿದೆ. ವಳಕಾಡು ಶಾಲೆಯ ಶೌಚಾಲಯಕ್ಕೆ ಅನುದಾನ ಒದಗಿಸಿದ ಸಂಸ್ಥೆಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಸಮಾರಂಭದಲ್ಲಿ MRPL ಸಂಸ್ಥೆಯ ಅಧಿಕಾರಿ ಶ್ರೀ ದಯಾನಂದ ಪ್ರಭು, ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಯಲ್ಲಮ್ಮ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಡಾ. ವಿರೂಪಾಕ್ಷ, ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ರಮೇಶ ಹೆಗ್ಗಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಶೇಟ್, ಶಾಲಾ ಜಿಲ್ಲಾ ಪಂಚಾಯತ್ ಸಮಿತಿ ಉಪಾಧ್ಯಕ್ಷ ಶ್ರೀ ನಾಗಭೂಷಣ ಶೇಟ್, ಗೌರವ ಸಲಹೆಗಾರರಾದ ಡಾ. ಎಂ. ಆರ್. ಹೆಗ್ಡೆ, ಶ್ರೀಮತಿ ತಾರ, ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮ, ಶ್ರೀಮತಿ ಪೂರ್ಣಿಮ ಮೊದಲಾದವರು ಉಪಸ್ಥಿತರಿದ್ದರು.