Wednesday, April 23, 2025
HomeUncategorizedಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ನೀಡಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ: ಚಂದ್ರಶೇಖರ ನಾಣಿಲ್

ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ನೀಡಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ: ಚಂದ್ರಶೇಖರ ನಾಣಿಲ್

ಮುಲ್ಕಿ: ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ನೀಡಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು
ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾಣಿಲ್ ಹೇಳಿದರು
ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಯುಕೆಜಿ ಭಾಗದ ಪದವಿ ಪ್ರಧಾನ ಸಮಾರಂಭವನ್ನು ಸಂಸ್ಥೆಯ ಸಭಾಂಗಣದಲ್ಲಿ ದೀಪ ಬೆಳಗಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯ ಕೇಶವ ಎಚ್ ಮಾತನಾಡಿ
ವಿದ್ಯಾರ್ಥಿಗಳ ಬದುಕಿಗೆ ಶಿಕ್ಷಣ ಒಂದೇ ಪೂರಕವಲ್ಲ, ಶಿಕ್ಷಣೇತರ ಚಟುವಟಿಕೆಯಲ್ಲಿ ಭಾಗವಹಿಸಿ ಸಾಧಕರಾಗಬೇಕು ಎಂದರು.
ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಕಾರ್ಯದರ್ಶಿ ಬಾಲಚಂದ್ರ ಸನಿಲ್, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್. ಆಡಳಿತ ಮಂಡಳಿ ಸದಸ್ಯರಾದ ಶ್ರೀ ಯೋಗೀಶ್ ಕೋಟ್ಯಾನ್, ಅವಿನಾಶ್ ಕೋಟ್ಯಾನ್, ಪ್ರಜ್ಞ ಎ ಕೋಟ್ಯಾನ್,ಸಂಸ್ಥೆಯ ಆಡಳಿತಾಧಿಕಾರಿ ಶ ಮಂಜುಳಾ, ಪ್ರಾಂಶುಪಾಲ ಯತೀಶ್ ಅಮೀನ್, ಮುಖ್ಯೋಪಾಧ್ಯಾಯಿನಿ ಗೀತಾ ಶೆಟ್ಟಿ, ಹಳೆ ವಿದ್ಯಾರ್ಥಿಗಳಾದ ಪ್ರತಿಕ್ಷ್ ಹಾಗೂ ವರುಣ್ ಸಂಸ್ಥೆಯ ಕಾರ್ಯದರ್ಶಿಬಾಲಚಂದ್ರ ಸನಿಲ್ ಸ್ವಾಗತಿಸಿ, ತೇಜಾಕ್ಷಿ ಮತ್ತಿತರರು ಉಪಸ್ಥಿತರಿದ್ದರು ವಿದ್ಯಾರ್ಥಿನಿಯರಾದ ವಂದಿತ ಹಾಗೂ ನಿರ್ವಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರಾಥಮಿಕ ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

RELATED ARTICLES
- Advertisment -
Google search engine

Most Popular