ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ರೈಲು ಹಳಿಯ ಸಮೀಪ ಸುಮಾರು 40 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಪತ್ತೆಯಾಗಿದೆ.
ಅಪರಿಚಿತ ಮೃತ ವ್ಯಕ್ತಿಯ ತಲೆಯ ಮೇಲೆ ಗಾಯದ ಕುರುಹಗಳು ಕಂಡುಬಂದಿದ್ದು, ಸ್ಥಳೀಯರು ರಕ್ತಸಿಕ್ತ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಹಾಗೂ ಮಂಗಳೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.