ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ವಿಫಲ; ಅಣ್ಯಾಧಿಕಾರಿಯನ್ನೇ ಬೋನಿನಲ್ಲಿ ಕೂಡಿ ಹಾಕಿ ದಿಗ್ಭಂಧನ ವಿಧಿಸಿದ ರೈತರು!

0
151

ಗುಂಡ್ಲುಪೇಟೆ(ಚಾಮರಾಜನಗರ): ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ವಿಫಲವಾದ ಹಿನ್ನೆಲೆ ಸುಮಾರು 10ಕ್ಕೂ ಅಧಿಕ ಮಂದಿ ರೈತರು ಅಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಬೋನಿನಲ್ಲಿ ಕೂಡಿ ಹಾಕಿ, ದಿಗ್ಭಂಧನ ವಿಧಿಸಿದ ಅಪರೂಪದ ಪ್ರಸಂಗ ಬಫರ್ ಜೋನ್ ವಲಯ ವ್ಯಾಪ್ತಿಯ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಮಂಗಳವಾರ (ಸೆ.9) ಬೆಳಿಗ್ಗೆ ನಡೆದಿದೆ.

ತಾಲೂಕಿನ ಬೊಮ್ಮಲಾಪುರ ಗ್ರಾಮದ ಕೆಇಬಿ ಪಕ್ಕದ ಗಂಗಪ್ಪ ಎಂಬ ರೈತನ ಜಮೀನಿನಲ್ಲಿ ಕೆಲ ತಿಂಗಳಿಂದ ಹುಲಿ-ಚಿರತೆ ಉಪಟಳ ಹೆಚ್ಚಿದ್ದು, ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ರೈತರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಬಳಿಕ ಅರಣ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಇತ್ತ ಸುಳಿಯದ ಹಿನ್ನೆಲೆ ರೈತರು ಬೇಸತ್ತಿದ್ದರು. ಮಂಗಳವಾರ ಬೆಳಿಗ್ಗೆ ಹುಲಿ ಸುತ್ತಮುತ್ತಲ ರೈತರ ಜಮೀನಿನಲ್ಲಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ನಿಗದಿತ ಸಮಯಕ್ಕೆ ಅರಣ್ಯ ಇಲಾಖೆಯವರು ಬಾರದ ಹಿನ್ನೆಲೆ ರೈತರು ರೊಚ್ಚಿಗೆದ್ದು ನಂತರ ಆಗಮಿಸಿದ ಸುಮಾರು 10ಕ್ಕೂ ಅಧಿಕ ಮಂದಿ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿ ದಿಗ್ರಂಧನ ಹಾಕಿ ಅಸಮಾಧಾನ ಹೊರಹಾಕಿದರು.
ಮಾಹಿತಿ ಅರಿತ ಗುಂಡ್ಲುಪೇಟೆ ವಲಯದ ಎಸಿಎಫ್ ಸುರೇಶ್ ಹಾಗೂ ಬಂಡೀಪುರ ವಲಯದ ಎಸಿಎಫ್ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ರೈತರ ಮನವೊಲಿಸಲು ಪ್ರಯತ್ನಿಸಿದರು. ಹುಲಿ ಸೆರೆ ಹಿಡಿಯುವ ತನಕ ಊರಿನಿಂದ ಹೊರಗೆ ಅರಣ್ಯಾಧಿಕಾರಿಗಳು ಹೋಗಬಾರದು ಎಂದು ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

LEAVE A REPLY

Please enter your comment!
Please enter your name here