ಹೆಬ್ರಿ : ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದ ನಾಗಬನದಲ್ಲಿ ಫೆಬ್ರವರಿ 19 ರಿಂದ 21ರ ವರೆಗೆ ನಡೆಯಲಿರುವ ಪಾರಂಪಾರಿಕ ಏಕಪವಿತ್ರ ಶ್ರೀಮನ್ನಾಗಮಂಡಲದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಕಟಪಾಡಿ ಆನೆಗೊಂದಿ ಮಹಾಸಂಸ್ಥಾನದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಬಿಡುಗಡೆ ಮಾಡಿದರು.
ಪ್ರಕೃತಿಯ ಆರಾಧನೆಯೊಂದಿಗೆ ಪಾರಂಪರಿಕ ಸಂಪ್ರದಾಯದೊಂದಿಗೆ ನಾಗಮಂಡಲವನ್ನು ಡಾ. ಜಿ. ರಾಮಕೃಷ್ಣ ಆಚಾರ್ ಮಾಡುವ ಸಂಕಲ್ಪ ಮಾಡಿರುವುದು ಅತೀವವಾದ ಸಂತೋಷದ ವಿಚಾರ. ಇದೊಂದು ಅಪರೂಪದ ಕಾರ್ಯಕ್ರಮ. ಸಮಸ್ತ ಹಿಂದೂ ಸಮಾಜ ಬಾಂಧವರು ನಾಗಮಂಡಲದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು.
ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್, ಟ್ರಸ್ಟಿ ಸವಿತಾ ರಾಮಕೃಷ್ಣ ಆಚಾರ್, ಏಕಪವಿತ್ರ ಶ್ರೀಮನ್ನಾಗಮಂಡಲದ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಮೂಡಬಿದರೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಶ್ವಕರ್ಮ ಸಮಾಜದ ಪ್ರಮುಖರಾದ ಶ್ರೀಧರ ಆಚಾರ್ಯ, ದಾಮೋದರ ಶರ್ಮ ಬಾರ್ಕೂರು, ವಿಶ್ವಕರ್ಮ ಸಮಾಜದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

