Sunday, July 14, 2024
Homeಅಪರಾಧಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

ಕೊಪ್ಪಳ: ಪತಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮವ್ವಾ ವಾಲಿಕಾರ್​ (36) ಕೊಲೆಯಾದವರು. ನಿಂಗಪ್ಪ ವಾಲಿಕಾರ್ (40) ಆತ್ಮಹತ್ಯೆ ಮಾಡಿಕೊಂಡವರು. ಕುಡಿತದ ಚಟಕ್ಕೆ ದಾಸನಾಗಿದ್ದ ನಿಂಗಪ್ಪ ಅನೇಕ ಕಡೆ ಸಾಲ ಮಾಡಿದ್ದನು. ಕುಡಿದು ಬಂದು ನಿತ್ಯ ಪತ್ನಿ ಜೊತೆ ಗಲಾಟೆ ಮಾಡುತ್ತಿದ್ದನು.

ಮಂಗಳವಾರ (ಏ.09) ರಾತ್ರಿ ನಿಂಗಪ್ಪ ಪತ್ನಿ ಲಕ್ಷ್ಮವ್ವಾ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular