ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ವಿಚಾರಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ :ಜಿತೇಂದ್ರ ಶೆಟ್ಟಿ ಉದ್ಯಾವರ

0
2

ಶಿರ್ವದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳದ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ಮಂಗಳೂರು ವಿಭಾಗದ ಬಜರಂಗದಳದ ಪ್ರಮುಖರಾದ ಪುನೀತ್ ಅತ್ತಾವರ ಅವರನ್ನು ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿರುವ ಜಿಲ್ಲಾಡಳಿತದ ಕ್ರಮವನ್ನು ಕಾಪು ಬಿಜೆಪಿಯು ತೀವ್ರವಾಗಿ ಖಂಡಿಸುತ್ತದೆ.

ಅಖಂಡ ಭಾರತ ಸಂಕಲ್ಪ ದಿನವು ದೇಶದ ಏಕತೆ, ಅಖಂಡತೆ, ರಾಷ್ಟ್ರಭಕ್ತಿ ಹಾಗೂ ರಾಷ್ಟ್ರೀಯ ಜಾಗೃತಿಯ ಸಂದೇಶವನ್ನು ಸಾರುವ ಕಾರ್ಯಕ್ರಮವಾಗಿದೆ. ಇಂತಹ ಶಾಂತಿಯುತ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಸಂಘಟನೆಯ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮವಾಗಿದೆ.

ಜಿಲ್ಲಾಡಳಿತವು ಕಾನೂನು ಮತ್ತು ಸುವ್ಯವಸ್ಥೆಯ ಹೆಸರಿನಲ್ಲಿ ಶಾಂತಿಯುತವಾಗಿ ನಡೆಯುವ ಕಾರ್ಯಕ್ರಮಗಳಿಗೆ ಇಂತಹ ನಿರ್ಬಂಧಗಳನ್ನು ಹೇರುವ ಮೂಲಕ ಸಂಘಟನೆಯ ಕಾರ್ಯಕರ್ತರ ಹಕ್ಕುಗಳನ್ನು ಕುಂಠಿತಗೊಳಿಸುವ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ.

ಆದ್ದರಿಂದ, ಸಂಬಂಧಪಟ್ಟ ವ್ಯಕ್ತಿಯ ಮೇಲಿನ ನಿರ್ಬಂಧವನ್ನು ಕೂಡಲೇ ಮರುಪರಿಶೀಲಿಸಿ ಹಿಂಪಡೆಯಬೇಕು ಹಾಗೂ ಅಖಂಡ ಭಾರತ ಸಂಕಲ್ಪ ದಿನದಂತಹ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಸಂದೇಶ ಸಾರುವ ಕಾರ್ಯಕ್ರಮಗಳು ಯಾವುದೇ ಅನಗತ್ಯ ಅಡೆತಡೆಗಳಿಲ್ಲದೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸುತ್ತೇವೆ

ನಿರ್ಬಂಧಗಳ ಮೂಲಕ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ವಿಚಾರಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅರ್ಥಮಾಡಿಕೊಳ್ಳಬೇಕು.

ಜಿತೇಂದ್ರ ಶೆಟ್ಟಿ ಉದ್ಯಾವರ
ಅಧ್ಯಕ್ಷರು ಬಿಜೆಪಿ ಕಾಪು ಮಂಡಲ