Wednesday, February 19, 2025
HomeUncategorizedದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಕರ್ನಾಟಕ ರಾಜ್ಯ ಮಕ್ಕಳ...

ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ – ಜಾಗೃತಿ ಕಾರ್ಯಕ್ರಮ

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಇದರ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ ಬೇಡೆಮಾರ್ ವಹಿಸಿದ್ದರು.ವಿಟ್ಲ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ವೆಂಕಟೇಶ್ ಹಳ್ಳಿ ಹಾಗೂ ಮನೋಜ್ ಇವರು ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ರಾಘವ ಮೈರ, ಉಪಾಧ್ಯಕ್ಷರಾದ ಸವಿತಾ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ಪುಷ್ಪ ಬಲ್ಲಾಳ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಅಧ್ಯಾಪಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ತದನಂತರ ಶಾಲಾ ಮಕ್ಕಳಿಂದ ಇಂಗ್ಲಿಷ್ ಫೆಸ್ಟ್ ಕಾರ್ಯಕ್ರಮ ನಡೆಯಿತು. ಮಕ್ಕಳಿಂದ ವಿವಿಧ ಚಟುವಟಿಕೆಗಳು ನಡೆಯಿತು.

ಮುಖ್ಯ ಶಿಕ್ಷಕಿ ಸುಜಾತಾ ಕೆ ರೈ,ಸ್ವಾಗತಿಸಿ, ಮುತ್ತುರಾಜ್ ವಂದಿಸಿದರು. ಲಲಿತಾ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular