Tuesday, January 14, 2025
Homeಬೆಂಗಳೂರುಹಲ್ಲೆಗೆ ಮುಂದಾದ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಹಲ್ಲೆಗೆ ಮುಂದಾದ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಬೆಂಗಳೂರು: ಶರಣಾಗಲು ಒಪ್ಪದೆ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮುಂದಾದ ರೌಡಿಶೀಟರ್ ಮೇಲೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಇಂದು ಬೆಳಗ್ಗೆ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಸಂದ್ರ ಬಳಿ ಈ ಘಟನೆ ನಡೆದಿದೆ.
ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಲೋಕೇಶ್(40) ಎಂಬಾತನನ್ನು ಬಂಧಿಸಲು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲೋಕೇಶ್‌ಗೆ ಶರಣಾಗುವಂತೆ ಕೇಳಿಕೊಂಡಿದ್ದರು. ಆದರೆ ಇದಕ್ಕೆ ಒಪ್ಪದೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಅಡ್ಡಬಂದ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಆತ್ಮರಕ್ಷಣೆಯಾಗಿ ಲೋಕೇಶ್‌ನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಗೊಂಡಿರುವ ಆರೋಪಿ ಲೋಕೇಶ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular