Tuesday, January 14, 2025
Homeಮಂಗಳೂರುವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ..!

ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ..!

ಮಂಗಳೂರು: ಕಳೆದ ಎರಡು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿದಿದೆ. ವಾರಾಂತ್ಯದಲ್ಲಿ ಎರಡೂ ಲೋಹಗಳ ಬೆಲೆ ಸ್ವಲ್ಪ ಹೆಚ್ಚಳಗೊಂಡಿದೆ. ಶುಕ್ರವಾರದವರೆಗೂ ಮೂರು ದಿನದಲ್ಲಿ 120 ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್​ಗೆ 40 ರೂನಷ್ಟು ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,100 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 7,745 ರೂಗೆ ಏರಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 1 ರೂ ಹೆಚ್ಚಳ ಆಗಿದೆ. ಗ್ರಾಮ್​ಗೆ 90.50 ರೂ ಇದ್ದ ಬೆಲೆ 91.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,150 ರುಪಾಯಿಯಲ್ಲಿ ಇದೆ.

ಡಿ. 22ಕ್ಕೆ ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ )

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ
RELATED ARTICLES
- Advertisment -
Google search engine

Most Popular