spot_img
25.6 C
Udupi
Monday, December 4, 2023
spot_img
spot_img
spot_img

ಸೆ.24 ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

ಉಡುಪಿ :ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಾಳೆ (ಸೆ.24) ರವಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯುವ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವರಾದ ಕು! ಶೋಭಾ ಕರಂದ್ಲಾಜೆಯವರು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಾಲನೆ ನೀಡಲಿದ್ದಾರೆ.

ಬಳಿಕ ಮಣ್ಣು ಸಂಗ್ರಹಿಸುವ ಅಮೃತ ಕಳಸಗಳನ್ನು ಕಡಿಯಾಳಿ ದೇವಸ್ಥಾನದಿಂದ ಬಿಜೆಪಿ ಜಿಲ್ಲಾ ಕಛೇರಿಯ ತನಕ ಮೆರವಣಿಗೆಯಲ್ಲಿ ತರುವ ಮೂಲಕ ಜಿಲ್ಲಾ ಕಛೇರಿಯಲ್ಲಿ ‘ಅಮೃತ ಕಳಸ ವಿತರಣೆ’ ಮತ್ತು ‘ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಪಕ್ಷದ ವತಿಯಿಂದ ಗೌರವಾರ್ಪಣೆ’ ನಡೆಯಲಿದೆ.

ಈ ಎರಡೂ ಕಾರ್ಯಕ್ರಮಗಳಿಗೆ ಜಿಲ್ಲೆಯ ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪ್ರತಿನಿಧಿ ಬಂಧುಗಳಿಗೆ ಆದರದ ಸ್ವಾಗತವನ್ನು ಬಯಸುತ್ತೇವೆ.

Related Articles

Stay Connected

0FansLike
3,912FollowersFollow
0SubscribersSubscribe
- Advertisement -

Latest Articles