ಬೆಳಗಾವಿ: ಬೆಳಗಾವಿ ತಾಲ್ಲೂಕು ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಗೊತ್ತಾಗಿದೆ.
ಇಲ್ಲಿನ ರಿಸಾಲ್ದಾರ ಗಲ್ಲಿಯಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಸಿ ಆಗಿದ್ದ ರುದ್ರೇಶ ಯಾದಣ್ಣವರ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಸೋಮವಾರ ರಾತ್ರಿ ಆಗಿರಬಹುದು. ಮಂಗಳವಾರ ಬೆಳಿಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಬಂದ ಮೇಲೆಯೇ ವಿಷಯ ಗೊತ್ತಾಗಿದೆ. ಮೇಲಧಿಕಾರಿಗಳ ಕಿರುಕುಳ ತಾಳದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಆರೋಪಿಸಿ ತಮ್ಮ ಮೊಬೈಲ್ನಲ್ಲಿ ವಿಡಿಯೊ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ