ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಎಲ್ಯಾರ್‌ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಎ.ಜೆ ಇನ್‌ಸ್ಟಿಟ್ಯೂಟ್ ಆಂಡ್ ಡೆಂಟಲ್ ಸೈನ್ಸ್, ಮಂಗಳೂರು ಹಾಗೂ ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಶರೂನ್ ಸ್ಟçಕ್ಚರ್ , ಹೋಲಿ ಕ್ರಾಸ್ ಚರ್ಚ್ ಬಳಿ, ಎಲ್ಯಾರ್‌ಪದವು, ಕೊಣಾಜೆ (ಶಾಖೆಯ ಆವರಣ) ಇಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಇದರ ನೋಡೆಲ್ ಅಧಿಕಾರಿಯಾದ ಪ್ರಶಾಂತ್ ಪೂರ್ಜೆ ರವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, “ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ, ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ ಹಾಗೂ ಈ ಶಿಬಿರದಲ್ಲಿ ಆಯುಷ್ಮಾನ್ (ಅಭಾ) ಕಾರ್ಡ್ ಮತ್ತು ಇಶ್ರಮ್ ಕಾರ್ಡ್ ಉಚಿತ ನೋಂದಾವಣಿಯನ್ನು ಮಾಡಲಾಗುತ್ತಿದ್ದು ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ” ತಿಳಿಸಿದರು.
ಸಿ.ಎಸ್.ಐ ಬೆಥಾನ್ಯ ಚರ್ಚ್ ಬೆಳ್ಮ ಕೊಣಾಜೆ ಇದರ ಸದಸ್ಯರು ಮತ್ತು ಶರೂನ್ ಸ್ಟçಕ್ಚರ್ ಕಟ್ಟಡದ ಮಾಲಿಕರಾದ ರೋನಾಲ್ಡ್ ಜೆ ಅಮ್ಮಣ್ಣ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನಸಾಮಾನ್ಯರ ಆರೋಗ್ಯದ ಕಾಳಜಿ ವಹಿಸಿ ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರವನ್ನು ನಡೆಸುತ್ತಿರುವುದಕ್ಕೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು”.
ಕೊಣಾಜೆ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಗೀತಾ ಕುಂದರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಜನರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿ, ಅವರಿಗೆ ಬೇಕಾದ ಸೌಲಭ್ಯಗಳನ್ನು ನೀಡುತ್ತಿರುವುದು ಶ್ಲಾಘನೀಯ” ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ.
ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಎಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಸಂಘದಲ್ಲಿ ಬ್ಯಾಂಕ್‌ಗಳಿಗೆ ನೇರವಾಗಿ ಹಣ ವರ್ಗಾವಣೆ, ಮಣಿಪಾಲ್ ಆರೋಗ್ಯ ಕಾರ್ಡ್ನ ಹೊಸ ಹಾಗೂ ನವೀಕರಣ ಸೌಲಭ್ಯ , ವಿಮಾ ಸೌಲಭ್ಯ ಮತ್ತು ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂಗೆ ರೂ.12000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಗರಿಷ್ಟ ಮೌಲ್ಯದಲ್ಲಿ ಶೀಘ್ರಗತಿಯಲ್ಲಿ ಸಾಲ ಸೌಲಭ್ಯ ನೀಡುವುದಲ್ಲದೇ, ಯಾವುದೇ ಹಣಕಾಸು ಸಂಸ್ಥೆಗಳಲ್ಲಿ ಅಡವಿಟ್ಟಿರುವ ಚಿನ್ನಾಭರಣಗಳನ್ನು ಬಿಡಿಸಿ ನಮ್ಮಲ್ಲಿ ಸಾಲ ನೀಡುವ ಸೌಲಭ್ಯವು ಕೂಡ ಲಭ್ಯವಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ (ರಿ.) ಅಂಬ್ಲಮೊಗರು ಇದರ ಅಧ್ಯಕ್ಷರಾದ ದೀಪಕ್, ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ) ಎಲ್ಯಾರ್‌ಪದವು ಇದರ ಉಪಾಧ್ಯಕ್ಷರಾದ ಯೋಗೀಶ್, ಅರ್ಧನಾರೀಶ್ವರ ಮಹಿಳಾ ಮಂಡಳಿ, ಸಂಪಿಗೆದಡಿ, ಹರೇಕಳ ಇದರ ಅಧ್ಯಕ್ಷರಾದ ಬಬಿತಾ ಹೆಗ್ಡೆ , ಕುತ್ತಿಮುಗೇರು ಸೇವಾ ಸಮಿತಿ ಹರೇಕಳ ಇದರ ಉಪಾಧ್ಯಕ್ಷರಾದ ಸತೀಶ್ ಬಂಗೇರ, ಎ.ಜೆ ಇನ್‌ಸ್ಟಿಟ್ಯೂಟ್ ಆಂಡ್ ಡೆಂಟಲ್ ಸೈನ್ಸ್, ಮಂಗಳೂರು ಇದರ ವೈದ್ಯರಾದ ಡಾ. ಆರಾಧನ, ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ನಾಟೆಕಲ್ ಇದರ ವೈದ್ಯರಾದ ಡಾ. ಪ್ರಬಿತಾ ಮತ್ತು ಪಿ.ಆರ್.ಓ ಆದ ಶ್ರೀ ರಶೀದ್, ಹಾಲು ಉತ್ಪಾದಕರ ಸಂಘ ಇದರ ಸಿಬ್ಬಂದಿಯಾದ ಶ್ರೀ ವಿದ್ಯಾ, ಮತ್ತು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ವೈದ್ಯಕೀಯ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ (ರಿ) ಅಂಬ್ಲಮೊಗರು, ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ) ಎಲ್ಯಾರ್ ಪದವು, ಶ್ರೀ ಅರ್ಧನಾರೀಶ್ವರ ಮಹಿಳಾ ಮಂಡಳಿ, ಸಂಪಿಗೆದಡಿ, ಹರೇಕಳ, ಕುತ್ತಿಮುಗೇರು ಸೇವಾ ಸಮಿತಿ, ಹರೇಕಳ, ಸಿ.ಎಸ್.ಐ. ಬೆಥಾನ್ಯ ಚರ್ಚ್ ಬೆಳ್ಮ, ಕೊಣಾಜೆ, ಹೋಲಿ ಕ್ರಾಸ್ ಚರ್ಚ್ ಎಲ್ಯಾರ್ ಪದವು ಹಾಗೂ ಹಾಲು ಉತ್ಪಾದಕರ ಸಂಘ, ಎಲ್ಯಾರ್ ಪದವು ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಔಷಧಿ ವಿತರಣೆ, ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸಾಮಾನ್ಯ ಸೇವಾ ಕೇಂದ್ರ ಮಂಗಳೂರು ನಗರ, ಇವರ ವತಿಯಿಂದ ಆಯುಷ್ಮಾನ್ (ಅಭಾ) ಕಾರ್ಡ್ ಮತ್ತು ಇಶ್ರಮ್ ಕಾರ್ಡ್ ಉಚಿತ ನೋಂದಾವಣಿಯನ್ನು ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ವಿಶ್ವನಾಥ್ ರವರು ಸ್ವಾಗತಿಸಿ, ಸಿಬ್ಬಂದಿ ಕುಮಾರಿ ನಿಶ್ಮಿತ ರವರು ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಕವಿತಾ ಶೋಶಿತ್ ರವರು ನಿರ್ವಹಿಸಿದರು.

