ಕಳವು ಪ್ರಕರಣ – 11 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಗಳ ಸೆರೆ

0
34

ಉಡುಪಿ: ಮಲ್ಪೆ ಬೀಚ್ ನಲ್ಲಿ 11 ವರ್ಷಗಳ ಹಿಂದೆ ನಡೆದಿದ್ದ ಕಳವು ಪ್ರಕರಣ ಸಂಬಂಧಿಸಿದಂತೆ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.k

ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿತ್ತು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ವಾರೆಂಟ್ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here