ಮಂಗಳೂರು: ರಿಷಬ್ ಶೆಟ್ಟಿ ಅವರು ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ಭಾಗಿ ಆಗಿದ್ದಾರೆ. ವಾರಾಹಿ ಪಂಜುರ್ಲಿ ದೈವದ ಬಳಿ ನಟ ಕಷ್ಟ ಹೇಳಿಕೊಂಡಿದ್ದಾರೆ. ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ‘ನಿನಗೆ ಶತ್ರುಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ.
ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈಬಿಡಲ್ಲ. ಯಾರು ನಿನಗೆ ಕೇಡು ಬಗೆದಿದ್ದಾರೆಂದು ಈಗ ಹೇಳಲ್ಲ, ನೋಡಿಕೊಳ್ತೇನೆ. ಹರಕೆ ಮಾಡಿಕೋ ಐದು ತಿಂಗಳ ಗಡುವಲ್ಲಿ ಒಳ್ಳೇದು ಮಾಡುತ್ತೇನೆ’ ಎಂದು ರಿಷಬ್ ಶೆಟ್ಟಿ ದಂಪತಿಗೆ ವಾರಾಹಿ ಪಂಜುರ್ಲಿ ದೈವ ಅಭಯ ನೀಡಿದೆ.