ತೋಕೂರು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮಾಹಿತಿ ಶಿಬಿರ – ಸಮವಸ್ತ್ರ ವಿತರಣೆ
ಮುಲ್ಕಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ), ಪಡುಪಣಂಬೂರು ಗ್ರಾಮ ಪಂಚಾಯತ್ , ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರ,ತೋಕೂರು ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲದ ಆಶ್ರಯದಲ್ಲಿ 10ನೇ ತೋಕೂರು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮಾಹಿತಿ ಶಿಬಿರ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು
ಕಾರ್ಯಕ್ರಮವನ್ನು ಉದ್ಯಮಿ ತೋಕೂರು ಗುತ್ತು ಹೊಸಮನೆ ಹರಿಪ್ರಸಾದ್ ಶೆಟ್ಟಿ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳಿಗೆ ದಾನಿಗಳ ನೆಲೆಯಲ್ಲಿ ಸಮವಸ್ತ್ರ ವಿತರಿಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ಮಾತನಾಡಿ ಸರಕಾರ ಮಕ್ಕಳ ಶಿಕ್ಷಣಕ್ಕೆ ಮಹತ್ತರ ಯೋಜನೆಗಳನ್ನು ರೂಪಿಸಿದ್ದು ದಾನಿಗಳು ಹಾಗೂ ಸೇವಾ ಸಂಸ್ಥೆಗಳು ಪ್ರೋತ್ಸಾಹಿಸಿದರೆ ಮತ್ತಷ್ಟು ಅಭಿವೃದ್ಧಿ ಸಾಧ್ಯ ಎಂದು ಹೇಳಿದರು
ಸಂಪನ್ಮೂಲ ವ್ಯಕ್ತಿಯಾಗಿ ಕೆಮ್ರಾಲ್ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಮಾರ್ಗರೇಟ್ ಸುದರ್ಶಿನಿ ರವರು ಸ್ತನ್ಯಪಾನ ಬಗ್ಗೆ ಮಾಹಿತಿಯನ್ನು ನೀಡಿದರು
ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಅಮೀನ್ ಸದಸ್ಯ ಮೋಹನ್ ದಾಸ್ , ಮಹಿಳಾ ಮತ್ತು ಮಕ್ಕಳ ಇಲಾಖೆಯ ಹಿರಿಯ ಮೇಲ್ವಿಚಾರಕಿ ಜ್ಯೋತಿ. ಫೇಮಸ್ ಯೂತ್ ಕ್ಲಬ್ ಅಧ್ಯಕ್ಷ ಸಂಪತ್ ಜೆ ಶೆಟ್ಟಿ. ಕಾರ್ಯದರ್ಶಿ ಮೋಹನ್, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಹಿಳಾ ಫೇಮಸ್ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್ , ಅಂಗನವಾಡಿ ಸಹಾಯಕಿ ವಿಶಾಂತಿ, ಕಾರ್ಯಕರ್ತೆ ಮೀನಾಕ್ಷಿ ಹಾಗೂ ಆಶಾ ಕಾರ್ಯಕರ್ತೆಯರು ಫೇಮಸ್ ಯೂತ್ ಕ್ಲಬ್ಬಿನ ಸದಸ್ಯರು ಹಾಗೂ ಮಕ್ಕಳ ಪೋಷಕರು ಸ್ತ್ರೀ ಶಕ್ತಿ ಸದಸ್ಯರು, ಮಕ್ಕಳು ಉಪಸ್ಥಿತರಿದ್ದರು ಶ್ರೀಮತಿ ರೇಷ್ಮಾ ಪ್ರಾರ್ಥಿಸಿದರು