ಭಟ್ಕಳ ಪಟ್ಟಣ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ..! ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ

0
66

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣವನ್ನು ಸ್ಫೋಟಿಸುವುದಾಗಿ ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಭಟ್ಕಳ ಶಹರ ಠಾಣೆಗೆ ಬೆದರಿಕೆ ಇ-ಮೇಲ್​ ಬಂದಿದೆ. ಜುಲೈ 10 ರಂದು ಬೆಳಿಗ್ಗೆ ಎರಡು ಬಾರಿ ಈ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಭಟ್ಕಳದ ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸುತ್ತಿದೆ. ಜಿಲ್ಲಾಡಳಿತ ಹೈ ಅಲರ್ಟ್‌ನಲ್ಲಿದೆ.

kannnannandik@gmail.com ನಿಂದ ಭಟ್ಕಳ ಶಹರ ಠಾಣೆಯ bhatkaltownkwr@ksp.gov.in ಗೆ ಇ-ಮೇಲ್ ಸಂದೇಶ ರವಾನಿಸಲಾಗಿದೆ.

ಪ್ರಕರಣ ಸಂಬಂಧ ಭಟ್ಕಳ ಶಹರ ಠಾಣೆ ಪಿಎಸ್​ ನವೀನ್ ನಾಯ್ಕ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇ-ಮೇಲ್ ಸಂದೇಶ ಬಂದ ಬೆನ್ನಲ್ಲೇ ಭಟ್ಕಳ ಪೊಲೀಸರು ಅಲರ್ಟ್ ಆಗಿದ್ದಾರೆ. ಜಿಲ್ಲಾ ಬಾಂಬ್ ನಿಷ್ಕ್ರಿಯ ದಳವು ಭಟ್ಕಳ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ನಡೆಸುತ್ತಿದೆ.

LEAVE A REPLY

Please enter your comment!
Please enter your name here