ನ. 22ರಂದು ಮಂಗಳೂರಿನಲ್ಲಿ ಆರಂಭೋತ್ಸವ ಕಾರ್ಯಕ್ರಮ
-ಮಂದಾರ ರಾಜೇಶ್ ಭಟ್
ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ, ಶೃಂಗೇರಿ ಇದರ ಆಶ್ರಯದಲ್ಲಿ ಮೂರು ದಿನಗಳ ಶ್ರೀ ಶಂಕರ ವಿಜಯೋತ್ಸವ–2026 ಡಿಸೆಂಬರ್ 28, 29 ಹಾಗೂ 30ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಉತ್ಸವದ ಪೂರ್ವಭಾವಿಯಾಗಿ ನವೆಂಬರ್ 22ರಂದು ಭಾನುವಾರ ಸಂಜೆ 4 ಗಂಟೆಗೆ ಮಂಗಳೂರಿನ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದ ಬಾಳಂಭಟ್ ಹಾಲ್ನಲ್ಲಿ ಆರಂಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಶೃಂಗೇರಿ ಶಾರದಾ ಪೀಠದ ಶಿಷ್ಯವರ್ಗ ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಶಂಕರ ವಿಜಯೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಶ್ರೀ ಶಂಕರ ವಿಜಯೋತ್ಸವ ಸಮಿತಿಯ ಪದಾಧಿಕಾರಿಗಳು ಉತ್ಸವದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಕಾರ್ಯಕ್ರಮವನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಆಮಂತ್ರಣ ಪತ್ರದಲ್ಲಿ ವಿನಂತಿಸಿದ್ದಾರೆ

