ತಿರುಪತಿಗೆ ಹೊರಟಿದ್ದ ಕುಟುಂಬದ ಮೂವರು ಭೀಕರ ಅಪಘಾತಕ್ಕೆ ಬಲಿ

0
60

ಬೆಂಗಳೂರು : ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಸಂಭವಿಸಿದೆ.

ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶ್ರೀಧರ್ ರಾವ್‌, ಪತ್ನಿ ಲಕ್ಷ್ಮಿ ಮತ್ತು ನಾಲ್ಕು ವರ್ಷದ ಮಗಳು ಆದ್ವಿಕಾ ಮೃತ ದುರ್ದೈವಿಗಳು. ಮೃತರು ದಂಪತಿ ಮೂಲತಃ ಆಂಧ್ರದ ವಾರಂಗಲ್ ನಿವಾಸಿಗಳಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ.

ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಕಾರು ಬಸ್ಸಿನ ಹಿಂಬದಿಗೆ ಡಿಕ್ಕಿಯಾಗಿದೆ. ಪರಿಣಾಮ ದಂಪತಿ, ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here