ಒಂದೇ ವ್ಯಕ್ತಿಯನ್ನು ಮದುವೆಯಾದ ಮೂವರು ಸಹೋದರಿಯರು

0
6

ಉತ್ತರ ಪ್ರದೇಶ : ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮೂವರು ಸಹೋದರಿಯರು ಒಂದೇ ವ್ಯಕ್ತಿಯನ್ನು ವಿವಾಹವಾಗಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸಾಮಾಜಿಕ ಮಾಧ್ಯಮ ಕಂಟೆಂಟ್ ಕ್ರಿಯೇಟರ್‌ಗಳಾಗಿ ಸಕ್ರಿಯರಾಗಿರುವ ಮೂವರು ಸಹೋದರಿಯರು, ಛಾಯಾಗ್ರಾಹಕ ಹಾಗೂ ಕ್ಯಾಮೆರಾಮನ್ ವಿಕಾಸ್ ಅಲಿಯಾಸ್ ವಿಕ್ಕು ಅವರನ್ನು ದೇವಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.

ಮದುವೆಯ ಬಳಿಕ ಬೇರೆಯಾಗಿ ವಾಸಿಸಲು ಇಷ್ಟವಿರಲಿಲ್ಲ. ಆದ್ದರಿಂದ ಒಬ್ಬರನ್ನೇ ಮದುವೆಯಾಗುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಹೋದರಿಯರು ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ವಿಕಾಸ್ ಅವರೊಂದಿಗೆ ಕ್ಯಾಮೆರಾಮನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮದುವೆ ಸಮಾರಂಭಕ್ಕೆ ಎರಡೂ ಕುಟುಂಬಗಳ ಸದಸ್ಯರು ಹಾಜರಾಗಿರಲಿಲ್ಲ ಎಂದು ವರದಿಯಾಗಿದೆ.

ಮದುವೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ಹಲವು ಹಿಂದೂ ಸಂಘಟನೆಗಳು ಈ ವಿವಾಹವನ್ನು ಧಾರ್ಮಿಕ ಹಾಗೂ ಸಾಮಾಜಿಕ ಸಂಪ್ರದಾಯಗಳಿಗೆ ವಿರುದ್ಧ ಎಂದು ಆಕ್ಷೇಪ ವ್ಯಕ್ತಪಡಿಸಿವೆ.

ಆದರೆ, ಈವರೆಗೆ ಈ ಸಂಬಂಧ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಹೀಗಾಗಿ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.