ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಖಂಡನೀಯ: ಪದ್ಮರಾಜ್ ಆರ್. ಪೂಜಾರಿ

0
91

ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿರುವ ಕೃತ್ಯ ಖಂಡನೀಯ.

ನ್ಯಾಯಮೂರ್ತಿಯವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆಯಲಾಗಿದ್ದು, ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಎಂಬುದು ಅತ್ಯಂತ ಆಘಾತಕಾರಿ ಸಂಗತಿ. ಮನುವಾದಿಗಳ ಮನಸ್ಥಿತಿ ಯಾವ ರೀತಿ ಇದೆ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಘಟನೆ ಬಗ್ಗೆ ಕೇಂದ್ರ ಸರ್ಕಾರದ ನಿಲುವೇನು? ಪ್ರಧಾನಿ, ಗೃಹಮಂತ್ರಿ ಹಾಗು ಕಾನೂನು ಸಚಿವರು ಏನು ಉತ್ತರ ಕೊಡುತ್ತಾರೆ? ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ವಕೀಲನೇ ಈ ರೀತಿಯ ಕೃತ್ಯ ಎಸಗಿರುವುದು ಗಂಭೀರ ವಿಷಯ. ಪರಿಸ್ಥಿತಿ ಎಲ್ಲಿಯವರೆಗೆ ತಲುಪಬಹುದು ಎಂಬುದು ಊಹಿಸಲಸಾಧ್ಯ. ಆದ್ದರಿಂದ ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ ಅವರಿಗೆ ಕೇಂದ್ರ ಸರ್ಕಾರ ಮತ್ತಷ್ಟು ರಕ್ಷಣೆ ನೀಡಬೇಕು. ಅಸಹಿಷ್ಣುತೆಯನ್ನು ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.


LEAVE A REPLY

Please enter your comment!
Please enter your name here