ಶಿರ್ವ: ಸಿಡಿಲು ಬಡಿದು ಇಲ್ಲಿನ ವಿದ್ಯಾರ್ಥಿಯೊಬ್ಬ ಗುರುವಾರ ರಾತ್ರಿ ಮೃತಪಟ್ಟಿದ್ದಾನೆ. ಇಲ್ಲಿನ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ, ಶಿರ್ವ ಎಂಎಸ್ ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ 20 ವರ್ಷದ ರಕ್ಷಿತ್ ಪೂಜಾರಿ ಮೃತರು.
ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ರಕ್ಷಿತ್ ಪೂಜಾರಿ ಮೇಲೆ ಸಿಡಿಲು ಬಡಿದಿದೆ. ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆ ವೇಳೆಗೆ ಮೃತಪಟ್ಟಿದ್ದಾರೆ.
ವಿದ್ಯಾರ್ಥಿ ನಿಧನಕ್ಕೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಿಕರಿಗೆ ಸರ್ಕಾರದಿಂದ ಸಿಗುವ ಪರಿಹಾರ ಒದಗಿಸಿಕೊಡಲು ಯತ್ನಿಸುವುದಾಗಿ ತಿಳಿಸಿದ್ದಾರೆ.