ಮಡಿಕೇರಿ: ಇಲ್ಲಿನ ಗ್ರಾಮೀಣ ಭಾಗದಲ್ಲಿ ದನಕರುಗಳನ್ನು ಬಲಿ ಪಡೆಯುತ್ತಿದ್ದ ಹುಲಿಯೊಂದು ಇದೀಗ ವಿರಾಜಪೇಟೆ ನಗರ ಪ್ರದೇಶದ ರಾಜ್ಯ ಹೆದ್ದಾರಿ ಬದಿಯಲ್ಲಿ ಕಾಣಿಸಿಕೊಂಡಿದೆ.
ವಿರಾಜಪೇಟೆ-ಮಡಿಕೇರಿ ಮುಖ್ಯರಸ್ತೆಯಲ್ಲಿರುವ ಕುಕ್ಲೂರು ಮುತ್ತಪ್ಪ ದೇವಸ್ಥಾನದ ಮುಂಭಾಗದಲ್ಲಿ ಹುಲಿ ರಸ್ತೆ ದಾಟುತ್ತಿರುವ ದೃಶ್ಯವನ್ನು ವಾಹನ ಸವಾರರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆ ರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.