ಉಡುಪಿ: ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಇಂದು ಬೆಳಿಗ್ಗೆ ಬೆಳ್ತಂಗಡಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿ ಬ್ರಹ್ಮಾವರ ವೃತ್ತ ನಿರೀಕ್ಷಕರ ಠಾಣೆಗೆ ಕರೆದೊಯ್ದಿದ್ದಾರೆ.
ಅಭಿಮಾನಿಗಳು ಹಾಗೂ ಹೋರಾಟಗಾರರು ಘೋಷಣೆಗಳನ್ನು ಕೂಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬ್ರಹ್ಮಾವರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಠಾಣೆಯ ಸುತ್ತ ಸೆಕ್ಷನ್ ಜಾರಿ ಮಾಡಲಾಗಿದೆ.

