ಕಾರ್ಕಳ: ಟಿಪ್ಪರ್ ಹಾಗೂ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನಿಬ್ಬರು ಗಾಯಗೊಂಡ ಘಟನೆ ಪಳ್ಳಿ ಗರಡಿ ರಸ್ತೆಯಲ್ಲಿ ನಡೆದಿದೆ. ಪಳ್ಳಿ ಗರಡಿಗೆ ಸಾಗುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.
ಸ್ಕೂಟಿ ಸವಾರ ನೇಪಾಳಿ ಮೂಲದ ಕಮಲ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಪ್ರಸನ್ನ ಮತ್ತು ಬಚ್ಚನ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಒಬ್ಬನನ್ನು ಹೆಚ್ಚಿನ ಚಿಕಿತ್ಸೆಗೆ ಬಳಿಕ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.