ಕಾರ್ಕಳ : ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ʻವಿಕಸಿತ ಭಾರತʼ ಪರಿಕಲ್ಪನೆಯನ್ನು
ಸಾಕಾರಗೊಳಿಸುವ ನಿಟ್ಟಿನಲ್ಲಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನವು ಈ ಬಾರಿ ಒಂದು ಆಂದೋಲನದ ರೀತಿಯಲ್ಲಿಯೇ ನಡೆಯಲಿದೆ. ಈ ನಿಟ್ಟಿನಲ್ಲಿ ಇಂದು ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳು ಸೇರಿದಂತೆ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪ್ರಮುಖರೊಂದಿಗೆ ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ನವೀನ್ ನಾಯಕ್‌ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸದಸ್ಯತ್ವ ಅಭಿಯಾನದ ಕುರಿತು ಕಾರ್ಯಾಗಾರ ನಡೆಸಲಾಯಿತು.
ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ಕಾರ್ಯಾಗಾರದಲ್ಲಿ ಮಾಹಿತಿ ನೀಡಲು ಆಗಮಿಸಿದ ಸದಸ್ಯತ್ವ ಅಭಿಯಾನದ
ಜಿಲ್ಲಾ ಸಂಚಾಲಕರಾದ ಶ್ರೀ ರಾಜೇಶ್ ಕಾವೇರಿ ಅವರು ಈ ಅಭಿಯಾನದ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ನೆರೆದ ಪ್ರಮುಖರಿಗೆ ಸವಿವರವಾಗಿ ನೀಡಿದರು. ಮಾನ್ಯ ರಾಜ್ಯ ಪ್ರದಾನ ಕಾರ್ಯದರ್ಶಿಗಳು, ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್‌ರವರು ಮಾತನಾಡಿ ಸೆಪ್ಟೆಂಬರ್ 02 ರಿಂದ 25 ಮತ್ತು ಅಕ್ಟೋಬರ್ 01 ರಿಂದ 15 ರವರೆಗೆ ಎರಡು ಹಂತಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದೆ. ಎಲ್ಲರೂ 88 0000 2024 ಸಂಖ್ಯೆಗೆ ಮಿಸ್ ಕಾಲ್ ಕೊಡುವ ಮೂಲಕ, ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಮತ್ತು ನಮೋ ಆಪ್ ಮೂಲಕ ನೋಂದಣಿಯಾಗಿ ಕಾರ್ಕಳ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗುವಂತೆ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಮಂಡಲಾಧ್ಯಕ್ಷರಾದ ಶ್ರೀ ನವೀನ್ ನಾಯಕ್ ಮಾತನಾಡಿ, ಈ
ಅಭಿಯಾನಕ್ಕೆ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ರವರು ಹಾಗೂ ನಮ್ಮ ಪ್ರಧಾನಿಗಳಾದ ನರೇಂದ್ರ ಮೋದಿಯವರು ಸದಸ್ಯತ್ವ ಪಡೆಯುವ ಮೂಲಕ ರಾಷ್ಟ್ರದಾದ್ಯಂತ ಈ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಉದಯ್ ಕೋಟ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಬೋಳ ಸತೀಶ್ ಪೂಜಾರಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.