ಇಂದು (ಆ. 29) ರಾಷ್ಟ್ರೀಯ ಕ್ರೀಡಾ ದಿನ; ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ

0
22

ಕ್ರೀಡೆಯು ನಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವಲ್ಲಿ, ಸಕ್ರಿಯವಾಗಿಡುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಕ್ರೀಡೆಯ ಈ ಮಹತ್ವವನ್ನು ಸಾರಲು ಹಾಗೂ ಜನರು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಲು ಹಾಕಿ ದಂತಕಥೆ ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಪ್ರತಿ ವರ್ಷ ಆಗಸ್ಟ್‌ 29 ರಂದು ಭಾರತರದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

ನಮ್ಮನ್ನು ಆರೋಗ್ಯಕರವಾಗಿ ಮತ್ತು ಫಿಟ್‌ ಆಗಿ ಇಡುವಲ್ಲಿ ಕ್ರೀಡೆ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯವೂ ಉತ್ತಮಗೊಳ್ಳುತ್ತದೆ. ಹೌದು ಕ್ರೀಡೆಯಿಂದ ಒತ್ತಡ ಕಡಿಮೆಯಾಗುತ್ತದೆ, ಮಾನಸಿಕ ಸ್ಥಿತಿ ಸುಧಾರಿಸುತ್ತದೆ. ಸಾಮಾಜಿಕ ಕೌಶಲ್ಯಗಳು, ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ. ಕ್ರೀಡೆಗಳ ಈ ಮಹತ್ವವನ್ನು ಸಾರಲು ಹಾಗೂ ಕ್ರೀಡಾ ಚಟುವಟಿಕೆಗಳನ್ನು ಜನರು ಹೆಚ್ಚು ಹೆಚ್ಚು ಭಾಗವಹಿಸುವಂತೆ ಪ್ರೋತ್ಸಾಹಿಸಲು ಹಾಕಿ ದಂತಕಥೆ ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮ ದಿನವಾದ ಆಗಸ್ಟ್‌ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು(National Sports Day) ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ರಾಷ್ಟ್ರೀಯ ಕ್ರೀಡಾ ದಿನದ ಇತಿಹಾಸ:

ಭಾರತವು ಆಗಸ್ಟ್ 29, 2012 ರಂದು ಮೊದಲ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಿತು. ಹಾಕಿ ಮಾಂತ್ರಿಕ ಹಾಗೂ ಶ್ರೇಷ್ಠ ಕ್ರೀಡಾಪಟು ಧ್ಯಾನ್‌ ಚಂದ್‌ ಅವರ ಮಹಾನ್‌ ಸಾಧನೆಯನ್ನು ಗೌರವಿಸುವ ಸಲುವಾಗಿ ಭಾರತ ಸರ್ಕಾರವು 2012 ರಂದು ಧ್ಯಾನ್‌ ಚಂದ್‌ ಅವರ ಜನ್ಮ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಅಂದಿನಿಂದ ಪ್ರತಿವರ್ಷ ಧ್ಯಾನ್‌ ಚಂದ್‌ ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಆಗಸ್ಟ್‌ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಕೀಡಾ ದಿನದ ಉದ್ದೇಶ:

ರಾಷ್ಟ್ರೀಯ ಕ್ರೀಡಾ ದಿನದ ಪ್ರಮುಖ ಉದ್ದೇಶವೆಂದರೆ ಕ್ರೀಡೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ದೈನಂದಿನ ಜೀವನದಲ್ಲಿ ದೈಹಿಕವಾಗಿ ಸಕ್ರಿಯವಾಗಿರಲು ಜನರನ್ನು ಪ್ರೋತ್ಸಾಹಿಸುವುದಾಗಿದೆ. ಫಿಟ್ ಇಂಡಿಯನ್ ವೆಬ್‌ಸೈಟ್ ಪ್ರಕಾರ, ಈ ದಿನದ ಉದ್ದೇಶವೆಂದರೆ ಕ್ರೀಡೆಯ ಮೌಲ್ಯಗಳಾದ ಶಿಸ್ತು, ಪರಿಶ್ರಮ, ಕ್ರೀಡಾ ಮನೋಭಾವ ಮತ್ತು ತಂಡದ ಕೆಲಸಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಜನರು ಕ್ರೀಡೆಗಳನ್ನು ಜೀವನದ ಅವಿಭಾಜ್ಯ ಅಂಗವಾಗಿಸಲು ಪ್ರೋತ್ಸಾಹಿಸುದಾಗಿದೆ.  ಅಲ್ಲದೆ ಈ ದಿನ ಫಿಟ್ ಮತ್ತು ಆರೋಗ್ಯವಾಗಿರುವುದರ ಮಹತ್ವವನ್ನು ಒತ್ತಿ ಹೇಳಲಾಗುತ್ತದೆ.

ಈ ದಿನದಂದು ಸರ್ಕಾರವು ಕ್ರೀಡೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಜೊತೆಗೆ ಈ ದಿನ ದೇಶದ ಪ್ರತಿಭಾನ್ವಿತ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಅನೇಕ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇವುಗಳಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ, ಧ್ಯಾನ್ ಚಂದ್ ಖೇಲ್‌ ರತ್ಮ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸೇರಿವೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಈ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರಧಾನ ಮಾಡುತ್ತಾರೆ.

LEAVE A REPLY

Please enter your comment!
Please enter your name here