ಉಜಿರೆ: ಕುಪ್ಪಳ್ಳಿಯ ರಾಷ್ಟçಕವಿ ಕುವೆಂಪು ಪ್ರತಿಷ್ಠಾನ ಮತ್ತು ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಇಂದ್ರಪ್ರಸ್ಥ ಸಭಾಂಗಣದಲ್ಲಿ ಇಂದು ಸೋಮವಾರ ಬೆಳಿಗ್ಯೆ ಹತ್ತು ಗಂಟೆಯಿಂದ ರಾಷ್ಟçಕವಿ ಕುವೆಂಪು ಅವರ ೧೨೦ನೆ ಜನ್ಮದಿನೋತ್ಸವದ ಅಂಗವಾಗಿ ವಿಶ್ವಮಾನವ ದಿನಾಚರಣೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬೋಜಮ್ಮ ಕೆ.ಎನ್. ಮತ್ತು ಕಾರ್ಯಕ್ರಮ ಸಂಯೋಜಕ ಪ್ರೊ. ರಾಜಶೇಖರ ಹಳೆಮನೆ ತಿಳಿಸಿದ್ದಾರೆ.
ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವಿಶೇಷ ಉಪನ್ಯಾಸ ನೀಡುವರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸುವರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಮತ್ತು ರಾಷ್ಟ್ರ ಕವಿ ಕುವೆಂಪು ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಶುಭಾಶಂಸನೆ ಮಾಡುವರು.
ಎಸ್.ಡಿ.ಎಂ. ಕಲಾಕೇಂದ್ರದ ವಿದ್ಯಾರ್ಥಿಗಳಿಂದ ನಾಗಿ ಕಥನ ಕವನರೂಪಕ ಪ್ರದರ್ಶನ ಮತ್ತು ನಾದಮಣಿನಾಲ್ಕೂರು ಕಲಾವಿದರಿಂದ ಕುವೆಂಪು ಹಾಡುಗಳ ಗಾಯನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.