ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ (ರಿ.) ಇದರ ವತಿಯಿಂದ ಪತ್ರಿಕಾ ದಿನಾಚರಣೆ – 2025 ಕಾರ್ಯಕ್ರಮವು ಇಂದು (ಜು. 5ರಂದು) ಬೆಳ್ತಂಗಡಿ ಸಂತೆಕಟ್ಟೆ,ಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ಅಪರಾಹ್ನ ಗಂಟೆ 2.30ರಿಂದ ಜರಗಲಿದೆ.
ಸಮಾರಂಭದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರು ನೆರವೇರಿಸಲಿದ್ದು, ,ಮುಖ್ಯ ಅತಿಥಿಗಳಾಗಿ ದ.ಕ. ಸಂಸದರಾದ ಕ್ಯಾ। ಬ್ರಿಜೇಶ್ ಚೌಟ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ , ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಭಾಗವಹಿಸಲಿದ್ದಾರೆ.
ಉಪನ್ಯಾಸ
ಬೆಂಗಳೂರು ಆಕಾಶವಾಣಿಯ ಸುದ್ದಿ ವಿಭಾಗದ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉಪನ್ಯಾಸ ನೀಡಲಿದ್ದು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್. ಎಲ್. ಸಿ.ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ.