ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಮೀಪದ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನ.1ರಂದು ಶತ ಚಂಡಿಕಾಯಾಗ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಈ ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾಯಾಗದಲ್ಲಿ ಬೆಳಿಗ್ಗೆ ಸಂಕಲ್ಪ ಕಾರ್ಯಕ್ರಮ ಸಹಿತ ಮಧ್ಯಾಹ್ನ ಪೂರ್ಣಾಹುತಿ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
