ಮಂಗಳೂರು: ತಲಪಾಡಿ ಟೋಲ್‌ಗೇಟ್ ಬಳಿಯ ಅಂಗಡಿಗಳನ್ನು ತೆರವುಗೊಳಿಸಲು ನವಯುಗ ಉಡುಪಿ ಟೋಲ್ ವೇ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಇಂದು ಮುಂದಾಗಿದೆ. ಸ್ಥಳೀಯರು ಹಾಗೂ ತಲಪಾಡಿ ಗ್ರಾಮ ಪಂಚಾಯತಿ ಸದಸ್ಯರ ಒತ್ತಾಯದ ಮೇರೆಗೆ ಜು. 20ರೊಳಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಎಚ್ಚರಿಕೆ ನೀಡಿ ಟೋಲ್ ಪ್ಲಾಜಾ ಅಧಿಕಾರಿಗಳು ಹಿಂದಿರುಗಿದ್ದಾರೆ.
2024ರ ಮಾರ್ಚ್‌ನಲ್ಲಿ ಕುಂದಾಪುರದಿಂದ ತಲಪಾಡಿವರೆಗಿನ ರಸ್ತೆ ಬದಿಯ ಅಂಗಡಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಅದರನ್ವಯ ಬೀದಿ ಬದಿ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಸೂಚನೆ ನೀಡಲಾಗಿತ್ತು. ಈ ಸಂಬಂಧ ನೋಟಿಸ್ ಕೂಡ ನೀಡಲಾಗಿತ್ತು. ಆದರೂ ತೆರವುಗೊಳಿಸದ ಅಂಗಡಿಗಳ ತೆರವಿಗೆ ಇಂದು ಕಾರ್ಯಾಚರಣೆ ನಡೆಸಲಾಗಿತ್ತು.