ನಾಳೆಯೂ (ಆ. 19): ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿಕೆ, ಉಡುಪಿಗೆ ರೆಡ್, ದ.ಕ.ಗೆ ಆರೆಂಜ್​ ಅಲರ್ಟ್​ ಘೋಷಣೆ

0
139

ಬೆಂಗಳೂರು : ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್ 24 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಲಾಗಿದೆ. ನಾಳೆಯೂ ಹಲವು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳವಾರ (ಆ.19) ದಂದು ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಈ ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ
ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟ, ಯಾದಗಿರಿ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.
ಆಗಸ್ಟ್​ 19ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here