ನಾಳೆ ಪುತ್ತೂರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ
ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವಾನ್ ಡಿ ಸೋಜ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ನಾಳೆ (ಆ. 28)ಬುಧವಾರ ಸಂಜೆ 4.30 ಕ್ಕೆ ಪುತ್ತೂರು ದರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಮಂಗಳೂರು ಉತ್ತರ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಆಗಮಿಸಲಿದ್ದಾರೆ.
ಮಾಜಿ ಶಾಸಕರುಗಳು, ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.