ಮಂಗಳೂರು: ಕೌಶಲ್ಯ ಅಭಿವೃದ್ಧಿ ಮತ್ತು ಸಮುದಾಯ ಸಬಲೀಕರಣಕ್ಕೆ ಬದ್ಧವಾಗಿರುವ ಟೊಯೋಟಾ ಟೆಕ್ನಿಕಲ್ ಟ್ರೇನಿಂಗ್ ಇನ್ಸ್ಟಿಟ್ಯೂಟ್ (ಟಿಟಿಟಿಐ) ತನ್ನ 2025-2028ನೇ ಸಾಲಿನ ಟಿಟಿಟಿಐ ರೆಗ್ಯುಲರ್ ಕೋರ್ಸ್ ಬ್ಯಾಚ್ನ ಪ್ರವೇಶ ಪ್ರಕ್ರಿಯೆಯನ್ನು ಇತ್ತೀಚೆಗೆ ಪ್ರಾರಂಭಿಸಿದೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪ್ರಾಯೋಜಿತ ಈ ಕೋರ್ಸು ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಯುವ ಸಮೂಹಕ್ಕೆ ಶೈಕ್ಷಣಿಕ ತರಬೇತಿ, ಉದ್ಯಮಕ್ಕೆ ಸಂಬಂಧಿತ ತರಬೇತಿ ಒದಗಿಸಿ ಅವರನ್ನು ಜಾಗತಿಕ ಮಟ್ಟದ ಅತ್ಯುತ್ತಮ ತಂತ್ರಜ್ಞರನ್ನಾಗಿ ರೂಪಿಸುವ ಗುರಿಯನ್ನು ಹೊಂದಿದೆ.

ಈ ಕುರಿತು ಮಾತನಾಡಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ನ ಫೈನಾನ್ಸ್ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಶ್ರೀ ಜಿ. ಶಂಕರ್ ಅವರು, “ಸೂಕ್ತ ಅವಕಾಶಗಳನ್ನು ಒದಗಿಸಿ ಜನರನ್ನು ಸಬಲೀಕರಣಗೊಳಿಸುವ ಮೂಲಕ ನಿಜವಾದ ಪ್ರಗತಿ ಆರಂಭವಾಗುತ್ತದೆ ಎಂದು ನಾವು ಟೊಯೋಟಾ ಸಂಸ್ಥೆಯಲ್ಲಿ ನಂಬಿಕೆ ಹೊಂದಿದ್ದೇವೆ. ಟೊಯೋಟಾ ಟೆಕ್ನಿಕಲ್ ಟ್ರೇನಿಂಗ್ ಇನ್ಸ್ಟಿಟ್ಯೂಟ್ ಕೂಡ ಈ ನಂಬಿಕೆಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ಗ್ರಾಮೀಣ ಭಾಗದ ಯುವಕರಿಗೆ ಧನಸಹಾಯ ಒದಗಿಸುವುದರ ಜೊತೆಗೆ ವಿಶ್ವ ದರ್ಜೆಯ ಕೌಶಲ್ಯ ತರಬೇತಿಯನ್ನು ನೀಡುತ್ತದೆ. ಮುಖ್ಯವಾಗಿ ಭಾರತದ ಉತ್ಪಾದನಾ ಶ್ರೇಷ್ಠತೆಯನ್ನು ಸಾರುವ ಭವಿಷ್ಯ- ಸಿದ್ಧ ಕಾರ್ಯಪಡೆಯನ್ನು ನಿರ್ಮಿಸುತ್ತಿದ್ದೇವೆ. ಈ ಅಪೂರ್ವ ಪಯಣದ ಭಾಗವಾಗಲು ಉತ್ಸಾಹಿ ಯುವ ಮನಸ್ಸುಗಳನ್ನು ಆಹ್ವಾನಿಸುತ್ತಿದ್ದೇವೆ,” ಎಂದರು.
ಈ ಲಿಂಕ್ ನ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿ: https://forms.office.com/r/UxSGWqBcGU
ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ವೆಬ್‌ಸೈಟ್ ಗೆ ಭೇಟಿ ನೀಡಿ – Toyota India | TTTI (toyotabharat.com)