ಜು. 25ಕ್ಕೆ ರಾಜ್ಯದಲ್ಲಿ ವರ್ತಕರ ಮುಷ್ಕರ

0
186

ಬೆಂಗಳೂರು: ಲಕ್ಷ ಲಕ್ಷ ರೂಪಾಯಿ ತೆರಿಗೆ, ಸಣ್ಣ ಸಣ್ಣ ವರ್ತಕರ ಮೇಲೆ ಬರೆ. ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ  ನೀಡಿರುವ ತೆರಿಗೆ ನೋಟಿಸ್‌ಗಳಿಂದ ಕಂಗಲಾಗಿರುವ ಅಂಗಡಿ ಮಾಲೀಕರು ಇದೀಗ ಕೆರಳಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸರ್ಕಾರಕ್ಕೆ ಒಗ್ಗಟ್ಟು ತೋರಿಸಲು, ಸರ್ಕಾರವನ್ನು ಪ್ರಶ್ನಿಸಲು ನಿರ್ಧರಿಸಿದ್ದಾರೆ. ಜುಲೈ 23ರಿಂದ ಜುಲೈ 25ರವರೆಗೆ ಹಂತ ಹಂತವಾಗಿ ಅಂಗಡಿ ಬಂದ್ ಮಾಡಲಾಗುತ್ತದೆ ಎಂದು ವರ್ತಕರು ತಿಳಿಸಿದ್ದಾರೆ. ಹೀಗಾಗಿ ಕಾರ್ಮಿಕ ಪರಿಷತ್ ಸದ್ಯ ಪ್ರತಿ ಅಂಗಡಿಗೂ ತೆರಳಿ ಕರಪತ್ರ ನೀಡುತ್ತಿದೆ. ಬಂದ್‌ಗೆ ಬಂಬಲಿಸಿ ಎಂದು ಮನವಿ ಮಾಡುತ್ತಿದೆ.

ಒಂದು ವಾರ ಬಂದ್‌ಗೂ ಸಿದ್ಧ: ಅಂಗಡಿ ಮಾಲೀಕರು

ಜುಲೈ 25ರ ಬಂದ್‌ಗೆ ಅಂಗಡಿ ಮಾಲೀಕರು ಬೆಂಬಲ ಸೂಚಿಸಿದ್ದು, ಅನಿವಾರ್ಯವಾದಲ್ಲಿ ಒಂದು ವಾರದ ಬಂದ್​ಗೂ ಸಿದ್ಧ ಎಂದಿದ್ದಾರೆ. ರಾಜಕೀಯ, ಹೋರಾಟ ಏನೇ ಇದ್ದರೂ ವ್ಯಾಪಾರಸ್ಥರು ಮಾತ್ರ ನೋಟಿಸ್‌ ವಿರುದ್ಧ ಸಿಡಿದೆದ್ದಿದ್ದಾರೆ. ಆದರೆ, ದಾಖಲೆ ಸಮೇತ ಮಾಹಿತಿ ನೀಡಿದರೆ, ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸುವ ಅಗತ್ಯವಿಲ್ಲ ಎಂದು ವಾಣಿಜ್ಯ ತೆರಿಗೆ ಇಲಾಖೆ ಹೇಳಿದೆ. ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಪಡೆದವರ ಗೊಂದಲಕ್ಕೆ ಸರ್ಕಾರ ಯಾವಾಗ ತೆರೆ ಎಳೆಯುತ್ತದೆ ಎಂದುದನ್ನು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here