Saturday, January 18, 2025
Homeಬಂಟ್ವಾಳಸ್ಕೂಟಿಯಲ್ಲಿ ಗೋಮಾಂಸ ಸಾಗಟ ಪತ್ತೆ: ಬಂಟ್ವಾಳದಲ್ಲಿ ಅಪಘಾತದ ವೇಳೆ ಬಯಲಾಯ್ತು ಅಕ್ರಮ

ಸ್ಕೂಟಿಯಲ್ಲಿ ಗೋಮಾಂಸ ಸಾಗಟ ಪತ್ತೆ: ಬಂಟ್ವಾಳದಲ್ಲಿ ಅಪಘಾತದ ವೇಳೆ ಬಯಲಾಯ್ತು ಅಕ್ರಮ

ಬಂಟ್ವಾಳ: ಬಂಟ್ವಾಳದ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್‌ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಗೋಮಾಂಸ ಸಾಗಾಟ ಪತ್ತೆಯಾಗಿದೆ.
ಘಟನೆ ಬಳಿಕ ಆರೋಪಿ ಪರಾರಿಯಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ. 24ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿವೇಗವಾಗಿ ಅಜಾಗರೂಕತೆ, ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಅನುರಾಧ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ. ಈ ವೇಳೆ ಎರಡೂ ಸ್ಕೂಟರಿನ ಸವಾರರು ಕೂಡ ರಸ್ತೆಗೆ ಬಿದ್ದು ಗಾಯವಾಗಿದ್ದು, ಆರೋಪಿಯ ಸ್ಕೂಟರಿನಿಂದ ಪ್ಲಾಸ್ಟಿಕ್‌ನಲ್ಲಿ ಕಟ್ಟಿದ ಮಾಂಸದ ಕಟ್ಟುಗಳು ಕೂಡ ರಸ್ತೆಗೆ ಬಿದ್ದಿದೆ.
ಆರೋಪಿಯ ಹೆಸರು ತಿಳಿದುಬಂದಿಲ್ಲ. ಆರೋಪಿ ಎಲ್ಲಿಯೋ ದನವನ್ನು ಹತ್ಯೆ ಮಾಡಿ ಮಾಂಸವನ್ನು ಮಾರಾಟದ ಉದ್ದೇಶದಿಂದ ಸಜೀಪ ಕಡೆಯಿಂದ ಮೆಲ್ಕಾರ್ ಕಡೆಗೆ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದನು ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಘಟನೆ ಸಂಬಂದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular