ವಿದ್ಯುತ್ ತಂತಿ ತಗುಲಿ ದುರಂತ: ಮೂವರ ಸಾವು

0
140

ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಕಾರ್ಮಿಕರಾದ ನಜೀರ್ (30), ಫಾರುಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್ (35) ಮೃತರು. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶ್ರೀನಿವಾಸ್​​ ಎಂಬುವವರು ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

LEAVE A REPLY

Please enter your comment!
Please enter your name here