ಮದುವೆಯಾದ ಕೆಲವೇ ಗಂಟೆಗಳಲ್ಲಿ ದುರಂತ ; ಹನಿಮೂನ್‌ಗೆ ತೆರಳುತ್ತಿದ್ದ ವರ ಮೃತ..!

0
8

ಅಮೆರಿಕಾ : ಹೊಸ ಜೀವನದ ಕನಸುಗಳೊಂದಿಗೆ ಹನಿಮೂನ್‌ಗೆ ತೆರಳುತ್ತಿದ್ದ ನವವಿವಾಹಿತ ಜೋಡಿಯ ಬಾಳಿನಲ್ಲಿ ಭೀಕರ ದುರಂತ ಸಂಭವಿಸಿದೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಭಾರತೀಯ ಮೂಲದ ಪೈಲಟ್ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ ನಡೆದಿದೆ.

ಕೇರಳ ಮೂಲದ 26 ವರ್ಷದ Dave Fizy ಅವರು ಅಮೆರಿಕಾದ Delta Air Lines ಸಂಸ್ಥೆಯಲ್ಲಿ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಮೇ 29ರಂದು ಅಮೆರಿಕಾದಲ್ಲಿ ನರ್ಸ್ ಆಗಿರುವ ಜೆಸ್ನಿ ಅವರನ್ನು ವಿವಾಹವಾಗಿದ್ದರು.

ಮದುವೆಯ ಸಂಭ್ರಮದ ಬಳಿಕ ನವಜೋಡಿ ರಾಬಿನ್ಸನ್ R66 ಹೆಲಿಕಾಪ್ಟರ್‌ನಲ್ಲಿ ಹನಿಮೂನ್‌ಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ಜಾರ್ಜಿಯಾದ ಡಾಸನ್ ಕೌಂಟಿಯ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ.

ಅಪಘಾತದಲ್ಲಿ ಡೇವ್ ಹಾಗೂ ಹೆಲಿಕಾಪ್ಟರ್ ಪೈಲಟ್ ಮೃತಪಟ್ಟಿದ್ದು, ಜೆಸ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಅಪಘಾತದ ವೇಳೆ ಪತ್ನಿಯ ಮಡಿಲಲ್ಲೇ ಡೇವ್ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ದುರಂತದ ಮಾಹಿತಿ ದೊರಕುತ್ತಿದ್ದಂತೆ ರಕ್ಷಣಾ ತಂಡಗಳು ಸುಮಾರು ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಅವಶೇಷಗಳನ್ನು ಪತ್ತೆಹಚ್ಚಿವೆ. ಗಾಯಗೊಂಡ ಜೆಸ್ನಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಕುರಿತು ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ತನಿಖೆ ಆರಂಭಿಸಿದ್ದು, ವರದಿ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

ಡೇವ್ ಅವರ ಪೋಷಕರು ಹಲವು ವರ್ಷಗಳ ಹಿಂದೆ ಕೇರಳದ ಎರ್ನಾಕುಲಂನಿಂದ ಅಮೆರಿಕಕ್ಕೆ ವಲಸೆ ಹೋಗಿದ್ದರು. ನವಜೋಡಿಯ ಈ ದಾರುಣ ಘಟನೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಮುದಾಯವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

LEAVE A REPLY

Please enter your comment!
Please enter your name here