ಮೈಸೂರಿನಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ಸ್ನಾನ ಮಾಡುವ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಜರುಗಿದೆ. ಗುಲ್ಫಾರ್ಮ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು.
ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ. ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರೋದು ಕಂಡು ಶಾಕ್ ಆಗಿದ್ದಾರೆ. ತಕ್ಷಣ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು.
ಈ ಘಟನೆಯಿಂದಾಗಿ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ, ಆಡಿ ಬೆಳೆಯಬೇಕಾದ ಮಕ್ಕಳು ಕಣ್ಮುಂದೆ ಇಲ್ಲವಾಗಿರುವುದು ಪಾಲಕರ ಅಕ್ರಂದನ ಮುಗಿಲು ಮುಟ್ಟಿತು.

