ಚೆನ್ನೈ: ತಮಿಳುನಾಡಿನ ತಿರುವಳ್ಳುವರ್ ಜಿಲ್ಲೆಯ ಗುಮ್ಮುಡಿಪೂಂಡಿಯಲ್ಲಿ ಶುಕ್ರವಾರ ರಾತ್ರಿ ಗೂಡ್ಸ್ ರೈಲೊಂದಕ್ಕೆ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 13 ಬೋಗಿಗಳು ಹಳಿ ತಪ್ಪಿ ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತಕ್ಕೀಡಾಗುವಾಗ ರೈಲು 75 ಕಿ.ಮೀ. ವೇಗದಲ್ಲಿ ಚಲಿಸುತ್ತಿತ್ತು ಎನ್ನಲಾಗಿದೆ. ಪೊನ್ನೇರಿ ರೈಲು ನಿಲ್ದಾಣ ದಾಟಿದ್ದ ರೈಲಿಗೆ ಕವರೈಪೆಟ್ಟೈ ನಿಲ್ದಾಣಕ್ಕೆ ಪ್ರವೇಶಿಸಲು ಗ್ರೀನ್ ಸಿಗ್ನಲ್ ನೀಡಲಾಗಿತ್ತು. ನೀಡಿದ್ದ ಸಿಗ್ನಲ್ ಪ್ರಕಾರ ಮುಖ್ಯ ಮಾರ್ಗಕ್ಕೆ ಹೋಗುವ ಬದಲು ಲೂಪ್ ಹಳಿಗೆ ಪ್ರವೇಶಿಸಿ ಆ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ. ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಗೂಡ್ಸ್ ರೈಲಿನ ಎರಡು ಬೋಗಿಗಳಿಗೆ ಬೆಂಕಿ ತಗುಲಿತ್ತು. ಅಗ್ನಿ ಶಾಮಕ ದಳವು ಬೆಂಕಿಯನ್ನು ನಂದಿಸಿದೆ. 19 ಮಂದಿ ಗಾಯಗೊಂಡಿದ್ದು, ಅವರಲ್ಲಿ 14 ಮಂದಿ ಗಂಭೀರವಾಗಿದ್ದಾರೆ ಎಂದು ತಿಳಿದುಬಂದಿದೆ.