ಗೊಂಡ: ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ ದುರಂತ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಲ್ಲಿವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲು ಮಧ್ಯಾಹ್ನ 2.35ರ ವೇಳೆಗೆ ಹಳಿ ತಪ್ಪಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಮೋತಿಗಂಜ್-ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ ದುರಂತ ಸಂಭವಿಸಿದೆ. ಸ್ಥಳಕ್ಕೆ 40ಕ್ಕೂ ಹೆಚ್ಚು ವೈದ್ಯರ ತಂಡ ಮತ್ತು 15 ಆಂಬುಲೆನ್ಸ್‌ಗಳು ಧಾವಿಸಿವೆ.