ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿ ಕಾರ್ಯಗಾರ

0
39


ವರದಿ ರಾಯಿ ರಾಜ ಕುಮಾರ

ಮೂಡುಬಿದಿರೆ ತಾಲೂಕಿನ ಎಲ್ಲ ಗ್ರಾಮಗಳ ಸ್ವಸಹಾಯ ಸಂಘಗಳ ಗ್ರಾಮೀಣರಿಗೆ ತರಬೇತಿ ಕಾರ್ಯಗಾರ ಅಕ್ಟೋಬರ್ 20ರಂದು ಸಮಾಜ ಮಂದಿರದಲ್ಲಿ ನಡೆಯಿತು. ಆದರ್ಶ ಗ್ರಾಮಭಿವೃದ್ದಿ ಸಂಸ್ಥೆಯ ಸಹಭಾಗಿತ್ವದಲ್ಲಿ 38 ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿಯನ್ನು ನಡೆಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೃಷಿ ಇಲಾಖೆಯ ಕಾರ್ಯಕ್ರಮ ಸಂಯೋಜಕ ಸಂಜು, ಬೆಳ್ತಂಗಡಿ ಕೃಷಿ ತರಬೇತಿ ಕೇಂದ್ರದ ಅಧಿಕಾರಿ ಗಣೇಶ್ ಅಡಿಗ, ಗೋಪಾಲ ಪೂಜಾರಿ, ತಾಕೊಡೆ ಇಗ್ನೇಶಿಯಸ್ ಲೋಬೋ ರವರುಗಳು ಸ್ವಸಹಾಯ ಸಂಘಗಳ ಸದಸ್ಯರಿಗೆ ಅತ್ಯಗತ್ಯವಾದ ಹಲವಾರು ಮಾಹಿತಿಗಳನ್ನು ನೀಡಿದರು. ಆರ್ಥಿಕ ಸಂಪನ್ಮೂಲವನ್ನು ಕ್ರೋಢಿಕರಿಸುವ ಹಲವಾರು ಅಂಶಗಳ ಬಗ್ಗೆಯೂ ಮಾಹಿತಿಯನ್ನು ಒದಗಿಸಿದರು. ಕೆಲವಾರು ಮಂದಿ ಪ್ರಶ್ನೆಗಳಿಗೆ ಪರಿಹಾರವನ್ನು ಪಡೆದುಕೊಂಡರು. ಆದರ್ಶ ಸಂಸ್ಥೆಯ ಮಮತಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here