ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನಗರದ ಆಸ್ಪತ್ರೆಯೊಂದರ ಬಳಿ ಘಟನೆ ನಡೆದಿದೆ.
ಮಂಡ್ಯ ತಾಲೂಕಿನ ಜಿ. ಬೊಮ್ಮನಹಳ್ಳಿ ಗ್ರಾಮದ 27ರ ಹರೆಯದ ಕಾರ್ತಿಕ್ ಮೃತ ಯುವಕ. ಆಸ್ಪತ್ರೆಗೆ ದಾಖಲಾಗಿದ್ದ ತಂದೆಯ ಆರೋಗ್ಯ ವಿಚಾರಿಸಿ ವಾಪಾಸಾಗುತ್ತಿದ್ದ ವೇಳೆ ಬಿರುಗಾಳಿ ಸಹಿತ ಮಳೆ ಬಂದ ಹಿನ್ನೆಲೆಯಲ್ಲಿ, ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದ. ಮರದ ಕೆಳಗೆ ಕಾರು ನಿಲ್ಲಿಸಿದ್ದರಿಂದ ಬಿರುಗಾಳಿಗೆ ಕಾರಿನ ಮೇಲೆಯೇ ಮರ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಕಾರ್ತಿಕ್ ಸಾವನ್ನಪ್ಪಿದ್ದು, ಕಾರಿನ ಹೊರಗಡೆ ನಿಂತಿದ್ದ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.