ಕೆಜಿ ರಸ್ತೆ ಪೆರ್ಡೂರಿನಲ್ಲಿ ಮರ ಕಡಿತ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸತೀಶ್‌ ಪೂಜಾರಿ ಕೀಳಂಜೆ ಆಗ್ರಹ

0
5

ಪೆರ್ಡೂರು : ಕೆಜಿ ರಸ್ತೆ ಪೆರಡೂರು ಭಾಗದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಅರಣ್ಯ ಇಲಾಖೆಯವರು ಹಲವು ವರ್ಷಗಳ ಹಿಂದೆ ನೆಟ್ಟಿದ್ದ ಬೆಳೆಬಾಳುವ ಗಿಡಗಳು ಇಂದು ದೊಡ್ಡ ಮರಗಳಾಗಿ ಬೆಳೆದು ನಿಂತಿವೆ. ಆದರೆ ದುಷ್ಕರ್ಮಿಗಳು ಈ ಮರಗಳನ್ನು ಕಡಿದು ರಸ್ತೆಯ ಬದಿಗೆ ಅರ್ಧಂಬರ್ಧವಾಗಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಮರಗಳನ್ನು ಉದ್ದೇಶಪೂರ್ವಕವಾಗಿ ಹಾನಿಗೊಳಿಸಿರುವ ಈ ಕೃತ್ಯ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪರಿಸರ ಸಂರಕ್ಷಣೆಗೆ ಮಹತ್ವದ ಪಾತ್ರ ವಹಿಸುತ್ತಿದ್ದ ಮರಗಳನ್ನು ಕಡಿದು ನಾಶಪಡಿಸಿರುವುದು ಪರಿಸರಕ್ಕೆ ಹಾನಿಯುಂಟು ಮಾಡುವ ಕೃತ್ಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪರಿಸರ ಪ್ರೇಮಿ ನವೀನ್ ಪೆರಡೂರು, ಮರಗಳನ್ನು ಕಡಿದು ಹಾನಿಗೊಳಿಸಿದವರನ್ನು ಪತ್ತೆಹಚ್ಚಿ ಅವರ ವಿರುದ್ಧ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ನಿಗಾ ವಹಿಸುವಂತೆ ಆಗ್ರಹಿಸಿದ್ದಾರೆ.

ಸ್ಥಳೀಯರು ಕೂಡ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here