ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ. ಪ್ರಗತಿ ಬಂದು ಸ್ವ- ಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ತಾಲೂಕು, ಉಪ ಅರಣ್ಯ ಇಲಾಖೆ ಬಂಟ್ವಾಳ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಂಟ್ವಾಳ ತಾಲೂಕು, ಇವುಗಳ ಸಹಯೋಗದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ ದಿನಾಂಕ 14-7-2025 ನೇ ಸೋಮವಾರ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಬಬ್ಬರ್ಯಬೈಲು ಇಲ್ಲಿ ನಡೆಯಲಿರುವುದು.
ಕಾರ್ಯಕ್ರಮಕ್ಕೆ ಗಣ್ಯರಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಾಜಿ ಅರಣ್ಯ ಸಚಿವ ರಾಮನಾಥ ರೈ, ಉಪ ವಲಯ ಅರಣ್ಯಾಧಿಕಾರಿಗಳಾದ ಕೃಷ್ಣ ನಾಯ್ಕ ಹಾಗೂ ಕೃಷ್ಣಜೋಗಿ, ಜನಜಾಗೃತಿ ವೇದಿಕೆ ಬೆಳ್ತಂಗಡಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ಇನ್ಸಂಟ್ ಪಾಯಸ್, ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೇಜಸ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ರಾಯೀ, ಹರಿಶ್ಚಂದ್ರ ಬಬ್ಬರ್ಯಬೈಲು, ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ, ವಸಂತ್ ಅಣ್ಣಳಿಕೆ, ತಾಲೂಕು ಯೋಜನಾಧಿಕಾರಿ ಜಯನಂದ ಪಿ ಮೊದಲಾದವರು ಭಾಗವಹಿಸಲಿರುವರು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಂಟ್ವಾಳ ತಾಲೂಕು ಯೋಜನಾ ಕಚೇರಿಯಿಂದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.