ಗುರ್ಮೆ ಫೌಂಡೇಶನ್ ವತಿಯಿಂದ ಅಂಗನವಾಡಿ ಕಾರ್ಯಕರ್ತರು ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

0
4

ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿರುವ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದ ಗುರ್ಮೆ ಫೌಂಡೇಶನ್ ವತಿಯಿಂದ “ಅಂಗನವಾಡಿ ಕಾರ್ಯಕರ್ತರು ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ” ಇಂದು ದಿನಾಂಕ 25-10-2026 ರಂದು ಕಾಪು ವೀರಭದ್ರ ದೇವಸ್ಥಾನ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ನಜೀರ್ ಹಾಗೂ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.