ಚಿದಂಬರ ಬೈಕಂಪಾಡಿ ಅವರಿಗೆ  ಗೌರವಾರ್ಪಣೆ 

0
4

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ  28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ‌ ಚಿದಂಬರ ಬೈಕಂಪಾಡಿ‌ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.25 ರಂದು ಬೆಳಗ್ಗೆ 11ಕ್ಕೆ  ನಗರದ ಪತ್ರಿಕಾ ಭವನದಲ್ಲಿ  ಸನ್ಮಾನಿಸಲಾಗುವುದು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಕೆ.ಆನಂದ ಶೆಟ್ಟಿ ಸನ್ಮಾನ‌ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು  ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here