ಕುಂದಾಪುರ: ಬೈಂದೂರು-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಸಂಗಮ ಜಂಕ್ಷನ್ ಬಳಿ ಟ್ರಕ್ ಕೆಳಗೆ ಸ್ಕೂಟರ್ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ರೋಸಿ ಮತ್ತು ಆಕೆಯ ಮಗಳು ರೆನಿಸ್ ಗಾಯಗೊಂಡವರು. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ ಹರ್ಯಾಣದಿಂದ ಕೊಝಿಕೋಡ್‌ಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಜಖಂಡಗೊಂಡಿದೆ. ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.