ಉತ್ಥಾನ ದ್ವಾದಶಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ತುಳಸಿ ಪೂಜೆ

0
7

ಉತ್ಥಾನ ದ್ವಾದಶಿಯ ಪವಿತ್ರ ಸಂದರ್ಭದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಪ್ರಯುಕ್ತ ಪರ್ಯಾಯ ಪೀಠಾಧೀಶರಾದ ಶ್ರೀ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠದಲ್ಲಿ ತುಳಸಿ ಪೂಜೆಯನ್ನು ಭಕ್ತಿಪೂರ್ವಕವಾಗಿ ನೆರವೇರಿಸಿದರು.

ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾದರು.