ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭವು ಮಾ.15ರ ಶನಿವಾರ ಬೆಳಿಗ್ಗೆ 10.00 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. 2022 ಹಾಗೂ 2023 ಹಾಗೂ 2024 ನೇ ಸಾಲಿನ ಗೌರವ ಪ್ರಶಸ್ತಿಗೆ 9 ಮಂದಿ ಹಿರಿಯ ಸಾಧಕರು ಆಯ್ಕೆಯಾಗಿದ್ದು, 10 ಮಂದಿ ಲೇಖಕರು ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.